
ಮಾಗಡಿ: ಪಟ್ಟಣದ ಕೆಂಪೇಗೌಡ ಸರ್ಕಲ್ ಬಳಿ ಮಂಗಳವಾದ ಸಂಚಾರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ನಡೆಯಿತು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಸರ್ಕಲ್ ಇನ್‌ಸ್ಪೆಕ್ಟರ್ ಗಿರಿರಾಜ್.ಜಿ.ವೈ ಮಾತನಾಡಿ, ಅಪರಾಧಿ ಕೃತ್ಯಗಳಲ್ಲಿ ತೊಡಗುವುದು, ಕಾನೂನು ಉಲ್ಲಂಘಿಸುವುದು ಕಂಡು ಬಂದಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ಬಡಾವಣೆಗಳಲ್ಲಿ ಹೊಸಬರು, ಅಪರಿಚಿತರು ಸಂಶಯದಿಂದ ಕಂಡುಬಂದಲ್ಲಿ ಕೂಡಲೇ ಠಾಣೆಗೆ ಮಾಹಿತಿ ನೀಡಬೇಕು. ಶಾಂತಿ ಭಂಗಕ್ಕೆ ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ. ರಸ್ತೆ ಸಂಚಾರಿ ನಿಯಮ ಪಾಲಿಸಬೇಕು ಎಂದರು.
ಪಿಎಸ್‌ಐ ಬಸವರಾಜು ಹಾಗೂ ಪೊಲೀಸ್ ಸಿಬ್ಬಂದಿ, ಆಟೊ ಚಾಲಕರು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.