ADVERTISEMENT

ಮಾಗಡಿ: ತಗೀಕುಪ್ಪೆ ಗ್ರಾಮ ಸಮಗ್ರ ಅಭಿವೃದ್ಧಿಗೆ ಒತ್ತು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 2:22 IST
Last Updated 18 ಆಗಸ್ಟ್ 2025, 2:22 IST
ಮಾಗಡಿ ತಾಲ್ಲೂಕಿನ ತಗ್ಗೀಕುಪ್ಪೆ ಕಾಲೋನಿಯಲ್ಲಿ ₹ 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಬಮೂಲ್ ನಿರ್ದೇಶಕರಾದ ಎಚ್.ಎನ್. ಅಶೋಕ್ ಭೂಮಿ ಪೂಜೆ ನೆರವೇರಿಸಿದರು ಗ್ರಾಮಸ್ಥರು ಜತೆಯಲ್ಲಿದ್ದರು.
ಮಾಗಡಿ ತಾಲ್ಲೂಕಿನ ತಗ್ಗೀಕುಪ್ಪೆ ಕಾಲೋನಿಯಲ್ಲಿ ₹ 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಬಮೂಲ್ ನಿರ್ದೇಶಕರಾದ ಎಚ್.ಎನ್. ಅಶೋಕ್ ಭೂಮಿ ಪೂಜೆ ನೆರವೇರಿಸಿದರು ಗ್ರಾಮಸ್ಥರು ಜತೆಯಲ್ಲಿದ್ದರು.   

ಮಾಗಡಿ: ತಾಲ್ಲೂಕಿನ ತಗೀಕುಪ್ಪೆ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ₹1.5ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ ಎಂದು ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್ ಹೇಳಿದರು.

₹30 ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

ಶಾಲೆ, ಹಾಸ್ಟೆಲ್ ಅಭಿವೃದ್ಧಿ, ಗ್ರಂಥಾಲಯ, ಅಂಬೇಡ್ಕರ್ ಭವನ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ADVERTISEMENT

ತಗೀಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ತೇಜಸ್ವಿನಿ ರಮೇಶ್ ಮಾತನಾಡಿ, ಕುರುಪಾಳ್ಯ ರಸ್ತೆ ಅಭಿವೃದ್ಧಿಗೂ ಅನುದಾನ ಬಿಡುಗಡೆ ಮಾಡಿದ್ದು ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಾಗುವುದು. ಸಮುದಾಯ ಭವನ ಅರ್ಧಕ್ಕೆ ನಿಂತಿದ್ದು ಪೂರ್ಣಗೊಳಿಸಲಾಗುವುದು ಎಂದರು.

ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ರಾಮಕೃಷ್ಣಯ್ಯ, ಟಿ.ಕೆ.ರಾಮು, ಗ್ರಾ.ಪಂ.ಮಾಜಿ ಅಧ್ಯಕ್ಷ ರಾಜಣ್ಣ, ಕಾಂತರಾಜು, ನಾಗರಾಜು, ಕಿಟ್ಟಪ್ಪ, ಕೃಷ್ಣಪ್ಪ, ರಮೇಶ್ ಗೌಡ, ಅಂಜನ್, ಪ್ರದೀಪ್, ಶ್ರೀನಿವಾಸ್, ಗಿರೀಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.