ADVERTISEMENT

ಚನ್ನಪಟ್ಟಣ | ಕಾರು ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2023, 7:41 IST
Last Updated 30 ನವೆಂಬರ್ 2023, 7:41 IST
ಶಿವರಾಮು
ಶಿವರಾಮು   

ಚನ್ನಪಟ್ಟಣ: ನಗರದ ಹೊರವಲಯ ರಾಮಮ್ಮನ ಕೆರೆ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ತಿಟ್ಟಮಾರನಹಳ್ಳಿ ಶಿವರಾಮು (35) ಮೃತರು. ಗ್ರಾ.ಪಂ ಸದಸ್ಯೆ ರೇಖಾ ಅವರ ಪತಿ. ಕಾರ್ಯನಿಮಿತ್ತ ಬೈಕ್‌ನಲ್ಲಿ ಚನ್ನಪಟ್ಟಣಕ್ಕೆ ಬಂದು ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಶಿವರಾಮು ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.