ರಾಮನಗರ: ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಧಾ (27) ಮೃತರು. ಆಕೆಯ ಪತಿ ಉಮೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇಂದಿರಾನಗರ ನಿವಾಸಿಗಳಾದ ಇವರು ಕಳೆದ ಒಂದು ತಿಂಗಳಿಂದ ಸೋಮನಹಳ್ಳಿಯಲ್ಲಿ ವಾಸವಿದ್ದರು. ದಂಪತಿ ನಡುವೆ ಆಗಾಗ್ಗೆ ಜಗಳ ನಡೆದಿತ್ತು. ಶುಕ್ರವಾರ ರಾತ್ರಿ ಮಲಗಿದ್ದ ವೇಳೆ ಆರೋಪಿಯು ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.