ಕನಕಪುರ: ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಹತ್ತು ವೇಳೆ ಬೆಂಗಳೂರಿನ ವೆಂಕಟೇಶ್ವರ ಬಡಾವಣೆಯ ನಿವಾಸಿ ತೇಜಸ್ವಿನಿ ಎಂಬುವರ ಮಾಂಗಲ್ಯ ಸರ ಕಳ್ಳತನವಾಗಿದೆ.
ಮೇ 11ರಂದು ತಾಲ್ಲೂಕಿನ ಸಂಗಮಕ್ಕೆ ಸಂಬಂಧಿಕರೊಂದಿಗೆ ಬಂದಿದ್ದ ಅವರು ಅದೇ ದಿನ ಸಂಜೆ 6ಕ್ಕೆ ಕನಕಪುರ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ತೆರಳುವ ಬಸ್ ಹತ್ತಿದ್ದಾರೆ. ನೂಕುನುಗ್ಗಲಿನಲ್ಲಿ ಕೊರಳಿನಲ್ಲಿದ್ದ 36 ಗ್ರಾಂ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ಕನಕಪುರ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.