ADVERTISEMENT

19ರಂದು ಮಾವು, ತೆಂಗು ಬೆಳೆಗಾರರ ಸಭೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 14:17 IST
Last Updated 15 ಫೆಬ್ರುವರಿ 2020, 14:17 IST

ಕನಕಪುರ: ರಾಮನಗರ ಜಿಲ್ಲಾ ಮಾವು ಮತ್ತು ತೆಂಗು ಬೆಳೆ ರೈತ ಉತ್ಪಾದಕರ ಕಂಪನಿಯ ಕನಕಪುರ ಘಟಕದ ಸರ್ವ ಸದಸ್ಯರ ಸಭೆಯು ಕೋಟೆ ರಂಗನಾಥಸ್ವಾಮಿ ದೇವಾಲಯದಲ್ಲಿ ಫೆ. 19ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಮಾವು ಮತ್ತು ತೆಂಗಿಗೆ ಸಂಬಂಧಪಟ್ಟ ಎನ್‌ಜಿಒ ಸಂಸ್ಥೆಗಳು ಹಾಗೂ ತೋಟಗಾರಿಕೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಉತ್ಪಾದಕರ ಕಂಪನಿಯು ಪ್ರಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT