ADVERTISEMENT

‘ಪ್ರಜಾಪ್ರಭುತ್ವ ಬಲವರ್ಧನೆಗೆ ಮತದಾನ ಮಾಡಿ’

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 20:00 IST
Last Updated 25 ಮಾರ್ಚ್ 2019, 20:00 IST
ರಾಮನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು
ರಾಮನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು   

ರಾಮನಗರ: ಡಾನ್ ಬಾಸ್ಕೊ ಯುವ ಮಾರ್ಗ ಸಂಸ್ಥೆ ವತಿಯಿಂದ ನಗರದ ರೈಲ್ವೆ ನಿಲ್ದಾಣ, ಸರ್ಕಾರಿ ಬಸ್ ನಿಲ್ದಾಣ ಹಾಗೂ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

‘18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಬೇಕು. ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆ ಜೀವಾಳವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಈ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’ ಎಂದು ಸಾಹಿತಿ ಅಬ್ಬೂರು ಎಂ. ಶ್ರೀನಿವಾಸ್ ತಿಳಿಸಿದರು.

ಸಂಸ್ಥೆಯ ಸಂಯೋಜಕ ವಿ. ರವಿ ಮಾತನಾಡಿ,, ಯಾವುದೇ ಸ್ವರೂಪದ ಚುನಾವಣಾ ಅಕ್ರಮ ಗಮನಕ್ಕೆ ಬಂದರೆ ಸಾರ್ವಜನಿಕರು ಮಾಹಿತಿ ಒದಗಿಸಲು, ಚುನಾವಣಾಣಾ ಆಯೋಗವು cVIGIL ಮೊಬೈಲ್ ಆಪ್‌ ಅನ್ನು ಬಿಡುಗಡೆ ಮಾಡಿದೆ. ನಾಗರಿಕರು ಗೂಗಲ್ ಪ್ಲೇಸ್ಟೋರ್ ಅಥವಾ ಚುನಾವಣಾ ಆಯೋಗದ ವೆಬ್‌ ಸೈಟ್‌ ceokarnataka.kar.nic.in ಮೂಲಕ ಮೊಬೈಲ್ ಆಪ್ ಡೌನ್ ಲೋಡ್‌ ಮಾಡಿಕೊಳ್ಳಬೇಕು. ಈ ಆ್ಯಪ್‌ನ ಮೂಲಕವು ದೂರು ನೀಡಬಹುದು ಎಂದು ತಿಳಿಸಿದರು.

ADVERTISEMENT

ಸಂಸ್ಥೆಯ ನಿರ್ದೇಶಕ ಜಾನ್‌ ಪೀಟರ್, ಸಿಬ್ಬಂದಿಯಾದ ಲೋಕೇಶ್, ಸತೀಶ್, ಶಿಲ್ಪ, ಸೌಭಾಗ್ಯ, ಕಿರಣ್ ರಾಜ್, ಗಾಯಿತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.