ADVERTISEMENT

ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಮೇಕೆಗಳ ಮೆರವಣಿಗೆ

ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 4:20 IST
Last Updated 15 ನವೆಂಬರ್ 2021, 4:20 IST
ರಾಮನಗರದ ಐಜೂರು ವೃತ್ತದಲ್ಲಿ ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಭಾಗವಹಿಸಿದ್ದರು. ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಬಾಯಿ, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಜಯಕುಮಾರ್, ಪದಾಧಿಕಾರಿಗಳು ಭಾಗವಹಿಸಿದ್ದರು
ರಾಮನಗರದ ಐಜೂರು ವೃತ್ತದಲ್ಲಿ ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಭಾಗವಹಿಸಿದ್ದರು. ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಬಾಯಿ, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಜಯಕುಮಾರ್, ಪದಾಧಿಕಾರಿಗಳು ಭಾಗವಹಿಸಿದ್ದರು   

ರಾಮನಗರ: ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಸರ್ಕಾರವನ್ನು ಒತ್ತಾಯಿಸಿ ಡಿಸೆಂಬರ್‌ನಲ್ಲಿ ಮೇಕೆಗಳ ಮೆರವಣಿಗೆ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ನಗರದ ಐಜೂರು ವೃತ್ತದಲ್ಲಿ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕರುನಾಡ ಸೇನೆ ವತಿಯಿಂದ ಭಾನುವಾರ ನಡೆದ ಪ್ರತಿಭಟನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರದಲ್ಲಿ ರಾಜ್ಯದ ಪ್ರಮುಖ ಪಕ್ಷಗಳು ಹೈಡ್ರಾಮ ಮಾಡುತ್ತಿವೆ ಎಂದು ಆರೋಪಿಸಿದರು.

‘ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಮ್ಮ ಸಂಘಟನೆಯೂ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಮಾಡಿವೆ. ಆದರೆ ರಾಜಕೀಯ ಪಕ್ಷಗಳು ಒಮ್ಮೆಯಾದರೂ ಹೋರಾಟ ಮಾಡಿವೆಯೇ? ಬಿಜೆಪಿ ಅಧಿಕಾರಕ್ಕೆ ಬಂದರೆ ಉಳಿದ
ಪಕ್ಷಗಳು ಯೋಜನೆಗೆ ಒತ್ತಾಯಿಸುತ್ತವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸಹ ಅದನ್ನೆ ಮಾಡುತ್ತದೆ. ಯಾರಿಗೂ ಈ ಯೋಜನೆ ಬಗ್ಗೆ ಬದ್ಧತೆ ಇಲ್ಲ’
ಎಂದರು.

ADVERTISEMENT

‘ಮೇಕೆದಾಟು ಯೋಜನೆಗೆ ತಡೆ ತಂದಿದ್ದೇವೆ ಎಂದು ತಮಿಳುನಾಡಿವರು ಬೊಬ್ಬೆ ಹೊಡೀತಿದ್ದಾರೆ. ಮೇಕೆದಾಟು ಯೋಜನೆಗೂ ತಮಿಳುನಾಡಿಗೂ ಏನು ಸಂಬಂಧ? ರಾಜ್ಯದಲ್ಲಿ ಅಧಿಕಾರಿಯಾಗಿದ್ದ ಅಣ್ಣಾಮಲೈ ಇಂದು ಮೇಕೆದಾಟು ಯೋಜನೆಗೆ ವಿರೋಧಿಸುತ್ತಿದ್ದಾರೆ. ಇದು ಸರಿಯಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಹುಚ್ಚುತನ ಮಾಡಬಾರದು. ರಾಜ್ಯದ ಮೇಲೆ ಗೂಬೆ ಕೂರಿಸಬಾರದು’ ಎಂದು ಒತ್ತಾಯಿಸಿದರು.

ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಬಾಯಿ, ಕರುನಾಡ ಸೇನೆ ಜಿಲ್ಲಾಧ್ಯಕ್ಷ ಸಿ.ಎಸ್.ಜಯಕುಮಾರ್, ಕರುನಾಡ ಸೇನೆ ಜಿಲ್ಲಾ ದಲಿತ ಘಟಕದ ಅಧ್ಯಕ್ಷ ಜಯರಾಮು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಸಮದ್, ತಾಲ್ಲೂಕು ಘಟಕದ ಅಧ್ಯಕ್ಷ ತ್ಯಾಗರಾಜ್, ಪದಾಧಿಕಾರಿಗಳಾದ ವರಲಕ್ಷ್ಮಿ, ರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.