– ಪ್ರಜಾವಾಣಿ ಚಿತ್ರ
ಚನ್ನಪಟ್ಟಣ: ತಾಲ್ಲೂಕಿನ ವಿರೂಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ 5 ವರ್ಷದ ಅವಧಿಯ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದು, ಸೆ. 28ರಂದು ಸಂಘದ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಸೆ.18ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಸೆ. 21ರಂದು ನಾಮಪತ್ರ ಪರಿಶೀಲನೆ, ಸೆ. 22 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಸೆ. 28ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ಕೆ.ಟಿ. ಉಮೇಶ್ ತಿಳಿಸಿದ್ದಾರೆ.
ಸಂಘದ ಆಡಳಿತ ಮಂಡಳಿಯ ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದರಲ್ಲಿ ಹಿಂದುಳಿದ ವರ್ಗ ಎ ಗೆ 1 ಸ್ಥಾನ, ಹಿಂದುಳಿದ ವರ್ಗ ಬಿ ಗೆ 1 ಸ್ಥಾನ, ಪರಿಶಿಷ್ಟ ಜಾತಿಗೆ 1 ಸ್ಥಾನ, ಪರಿಶಿಷ್ಟ ಪಂಗಡಕ್ಕೆ 1 ಸ್ಥಾನ, ಉಳಿದ 8 ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯು ಸಹಕಾರ ಸಂಘಗಳ ಅಧಿನಿಯಮದ ಪ್ರಕಾರ ಅರ್ಹ ಮತದಾರನಾಗಿರಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.