ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಬಳಿ ಭಾನುವಾರ ಹಾಲು ಸಾಗಣೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮಯೂರ್ ಗೌಡ (12) ಮೃತ ಬಾಲಕ. ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ವಾಹನ ಡಿಕ್ಕಿಯಾಯಿತು. ಅಪಘಾತದ ರಭಸಕ್ಕೆ ಆತ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.