ಹಾರೋಹಳ್ಳಿ: ಹೊನ್ನಾಲಗನ ದೊಡ್ಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಜೆಡಿಎಸ್, ಬಿಜೆಪಿ ಬೆಂಬಲಿತ ಎಂ.ಬಸವರಾಜು, ಉಪಾಧ್ಯಕ್ಷರಾಗಿ ಎಚ್.ಆರ್.ಅಶೋಕ್ ರಾಜೇ ಅರಸು ಅವಿರೋಧವಾಗಿ ಆಯ್ಕೆಯಾದರು.
ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಸವರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಆರ್.ಅಶೋಕ್ ಇಬ್ಬರೇ ನಾಮಪತ್ರ ಸಲ್ಲಿಸಿದ್ದು, ವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಸಹಕಾರ ಇಲಾಖೆಯ ಮಂಜುನಾಥ್ ತಿಳಿಸಿದರು.
ಸಹಾಯಕ ಚುನಾವಣಾ ಅಧಿಕಾರಿಯಾಗಿ ಸಂಘದ ಕಾರ್ಯದರ್ಶಿ, ನಾಗರಾಜು ಕರ್ತವ್ಯ ನಿರ್ವಹಿಸಿದ್ದರು. ಸಂಘದ ನಿರ್ದೇಶಕರಾದ ಚೈತ್ರಾ, ಎಚ್.ಕೆ.ರಾಮಯ್ಯ, ಎಚ್.ಎಸ್.ರಾಜು, ಮಹಲಿಂಗಯ್ಯ, ಮೋಟಯ್ಯ, ಪುಟ್ಟಸ್ವಾಮಿ, ಸುಜಾತಾ, ಕೆಂಪಮ್ಮ, ಹನುಮಮ್ಮ ಉಪಸ್ಥಿತರಿದ್ದರು. ನೂತನ ಅಧ್ಯಕ್ಷ, ಉಪಾಧ್ಯರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.