ADVERTISEMENT

ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ: ಪ್ರಭು ಚವಾಣ್‌ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 8:06 IST
Last Updated 15 ಫೆಬ್ರುವರಿ 2021, 8:06 IST
ಸಚಿವ ಪ್ರಭು ಚವಾಣ್‌
ಸಚಿವ ಪ್ರಭು ಚವಾಣ್‌   

ರಾಮನಗರ: ರಾಜ್ಯ ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹಸ್ತಕ್ಷೇಪ‌ ಮಾಡುತ್ತಿಲ್ಲ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ಸ್ಪಷ್ಟನೆ ನೀಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ಸಚಿವರು, ಶಾಸಕರಿಗೆ ತಮಗೆ ಬೇಕಾದ್ದನ್ನು ಕೇಳಿ ಪಡೆಯುವ ಹಕ್ಕಿದೆ. ಆದರೆ ಈ ವಿಚಾರದಲ್ಲಿ ಯತ್ನಾಳ ಸೇರಿದಂತೆ ಯಾರೊಬ್ಬರೂ ಮುಖ್ಯಮಂತ್ರಿ ಮತ್ತು ವಿಜಯೇಂದ್ರ ವಿರುದ್ಧ ಹೇಳಿಕೆ ನೀಡಬಾರದು'ಎಂದರು.

ಗೋಹತ್ಯೆ ನಿಷೇಧದಿಂದ ಮೃಗಾಲಯದ ಪ್ರಾಣಿಗಳಿಗೆ ಆಹಾರದ ಕೊರತೆ ಆಗಿರುವ ಕುರಿತು‌ ಮೃಗಾಲಯ ಪ್ರಾಧಿಕಾರದ ಅಧಿಕಾರಿಗಳು ಇಲಾಖೆ ಗಮನಕ್ಕೆ ತಂದಿಲ್ಲ. 13 ವರ್ಷ ಮೇಲ್ಪಟ್ಟ ಕೋಣ ಹಾಗೂ ಎಮ್ಮೆಗಳ ವಧೆಗೆ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.