FIR
– ಕಡತ ಚಿತ್ರ
ಕನಕಪುರ: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಸಹ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ವಿವೇಕಾನಂದ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭರತ್ (19) ಮತ್ತು ಆತನ ಸಹೋದರ ಗಗನ್ (21) ಹಲ್ಲೆಗೊಳಗಾದವರು. ಐಟಿಐ ವ್ಯಾಸಂಗ ಮಾಡುತ್ತಿರುವ ಕನಕಪುರದ ಮಾದೇಶ್, ಅನಿಲ್, ಸೂರ್ಯ, ಬಿಜ್ಜಳ್ಳಿ ಪ್ರೀತು ಸೇರಿದಂತೆ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜುಲೈ 10 ರಂದು ಐಟಿಐ ಕಾಲೇಜಿನಲ್ಲಿ ಓದುತ್ತಿರುವ ಮಾದೇಶ್, ಅನಿಲ್, ಸೂರ್ಯ ಹಾಗೂ ಪ್ರೀತು ಕಾಲೇಜಿನಲ್ಲಿ ವಿನಾಕಾರಣ ಜಗಳ ತೆಗೆದು ಭರತ್ ಮೇಲೆ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಂಜೆ 10 ಮಂದಿ ಗುಂಪು ಕಟ್ಟಿಕೊಂಡು ಬಂದು ಮಾರಕಾಸ್ತ್ರ ಹಿಡಿದು ವಿವೇಕಾನಂದ ನಗರದ ಭರತ್ ಅವರ ಮನೆ ಬಳಿ ಭರತ್ ಮತ್ತು ಗಗನ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ.
‘ವಿನಾಕಾರಣ ಆರೋಪಿಗಳು ನನ್ನ ಮಕ್ಕಳು ಭರತ್ ಮತ್ತು ಗಗನ್ ಮೇಲೆ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನನ್ನ ಮಕ್ಕಳಿಗೆ ರಕ್ಷಣೆ ನೀಡಬೇಕೆಂದು ಭರತ್ ತಾಯಿ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ’.
ದೂರಿನನ್ವಯ ಆರೋಪಿಗಳ ವಿರುದ್ಧ ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.