ADVERTISEMENT

ಭಾನುವಾರದ ಲಾಕ್‌ಡೌನ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 12:43 IST
Last Updated 26 ಜುಲೈ 2020, 12:43 IST
ರಾಮನಗರದ ಐಜೂರು ವೃತ್ತದಲ್ಲಿ ಭಾನುವಾರ ವಾಹನ ಸಂಚಾರ ಎಂದಿನಂತೆ ಇತ್ತು
ರಾಮನಗರದ ಐಜೂರು ವೃತ್ತದಲ್ಲಿ ಭಾನುವಾರ ವಾಹನ ಸಂಚಾರ ಎಂದಿನಂತೆ ಇತ್ತು   

ರಾಮನಗರ: ಕೋವಿಡ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಭಾನುವಾರದ ಲಾಕ್‌ಡೌನ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಲಾಕ್‌ಡೌನ್‌ ಆದೇಶದ ನಡುವೆಯೂ ಜಿಲ್ಲೆಯಲ್ಲಿ ವಾಹನಗಳ ಓಡಾಟ ಕಂಡುಬಂದಿತು. ಅದರಲ್ಲೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಿಗ್ನಲ್ ಕಾರ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಅಗತ್ಯ ವಸ್ತುಗಳಾದ ತರಕಾರಿ, ಹಣ್ಣು, ದಿನಸಿ ಪದಾರ್ಥಗಳು, ಆಸ್ಪತ್ರೆ, ಮೆಡಿಕಲ್ ಸ್ಟೋರ್‌, ಮಾಂಸದಂಗಡಿಗಳು ತೆರೆದಿದ್ದವು. ಬಾರ್, ಹೋಟೆಲ್‍ಗಳು ಮುಚ್ಚಿದ್ದವು. ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿಗೆ ಸಹ ರಜೆ ಘೋಷಣೆಯಾಗಿತ್ತು.

ಜನರು ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ರಸ್ತೆಗೆ ಇಳಿದಿದ್ದರು. ಗ್ರಾಮೀಣ ಪ್ರದೇಶಗಳಲ್ಲೂ ಜನರ ಓಡಾಟ ಹೆಚ್ಚಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.