ADVERTISEMENT

ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಮುಂದುವರಿಯಲಿ: ಅಪ್ಪಣ್ಣ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 13:34 IST
Last Updated 15 ಜೂನ್ 2020, 13:34 IST
ವಿಜಯಪುರದಲ್ಲಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಮುಖಂಡರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು
ವಿಜಯಪುರದಲ್ಲಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಮುಖಂಡರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು   

ವಿಜಯಪುರ: ವಿಧಾನಪರಿಷತ್ ಸದಸ್ಯರಾಗಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ರಾಜ್ಯದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಸದಸ್ಯರನ್ನಾಗಿ ಮುಂದುವರಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿರುವುದಾಗಿ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಅಪ್ಪಣ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಸಂಕಷ್ಟದ ಪರಿಸ್ಥಿತಿಯಲ್ಲಿರುವ ಪಕ್ಷವನ್ನು ಸಮರ್ಥವಾಗಿ ಕಟ್ಟುವ ಕೆಲಸ ಮಾಡಬೇಕಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳನ್ನು ಸಮರ್ಥವಾಗಿ ಸಂಘಟನೆ ಮಾಡುತ್ತಿರುವುದರ ಜತೆಗೆ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತಿರುವ ವಿಧಾನಪರಿಷತ್ ಸದಸ್ಯಎಂ.ಡಿ.ಲಕ್ಷ್ಮೀನಾರಾಯಣ ಅವರನ್ನು ಈ ಬಾರಿಯೂ ಸದಸ್ಯರನ್ನಾಗಿ ಮುಂದುವರಿಸುವ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬಿಸುವ ಕೆಲಸ ಮಾಡಬೇಕು ಎಂದರು.

ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಸರ್ಕಾರ ಬಿಡುಗಡೆ ಮಾಡಿರುವ ಪ್ಯಾಕೇಜ್ ನಲ್ಲಿ ಮಡಿವಾಳ ಸಮಾಜ, ನೇಕಾರರು ಹಾಗೂ ಸವಿತಾ ಸಮುದಾಯಗಳಿಗೆ ಸಮರ್ಪಕವಾಗಿ ಅನುದಾನ ಸಿಕ್ಕಿಲ್ಲ ಎಂದು ಎನ್.ಅಪ್ಪಣ್ಣ ಆರೋಪಿಸಿದರು.

ADVERTISEMENT

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ರಾಜಗೋಪಾಲ್, ಮುಖಂಡ ಕೆ.ಮುನಿರಾಜು, ಬ್ಲಾಕ್ ಉಪಾಧ್ಯಕ್ಷ ಟಿ.ಸುರೇಶ್, ಎಸ್.ಮಂಜುನಾಥ್, ಲೋಕೇಶ್, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.