ADVERTISEMENT

ಚನ್ನಪಟ್ಟಣ: ವಿದ್ಯಾ ಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ನೀಡಲಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 8:47 IST
Last Updated 11 ಡಿಸೆಂಬರ್ 2023, 8:47 IST
ಚನ್ನಪಟ್ಟಣ ಕೇಂಬ್ರಿಜ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ 22ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮಾಜಿ ಸದಸ್ಯ ಪುಟ್ಟಣ್ಣ, ಚಿತ್ರನಟಿ ಅನು ಪ್ರಭಾಕರ್‌ ಇತರರು ಭಾಗವಹಿಸಿದ್ದರು
ಚನ್ನಪಟ್ಟಣ ಕೇಂಬ್ರಿಜ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ 22ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮಾಜಿ ಸದಸ್ಯ ಪುಟ್ಟಣ್ಣ, ಚಿತ್ರನಟಿ ಅನು ಪ್ರಭಾಕರ್‌ ಇತರರು ಭಾಗವಹಿಸಿದ್ದರು   

ಚನ್ನಪಟ್ಟಣ: ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸಲಹೆ ನೀಡಿದರು.

ನಗರದ ಮಹದೇಶ್ವರನಗರದ ಕೇಂಬ್ರಿಜ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ 22ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಇಂತಹ ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸಿ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗುವ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಅವಶ್ಯಕ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಣ್ಣ ಮಾತನಾಡಿ, ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಕಷ್ಟಕರ. ಅಂತಹ ಪರಿಸ್ಥಿತಿಯಲ್ಲಿಯೂ ತಾಲ್ಲೂಕಿನ ಗ್ರಾಮೀಣ ಭಾಗದ ನೂರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಸಂಸ್ಥೆಯು ಶ್ರಮ ವಹಿಸಿದೆ. ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕøತಿಕ ಮತ್ತು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ರೂಪಿಸಿಕೊಂಡಿರುವುದು ಪ್ರಶಂಸನೀಯ ಎಂದರು.

ADVERTISEMENT

ಚಲನಚಿತ್ರ ನಟಿ ಅನು ಪ್ರಭಾಕರ್ ಮಾತನಾಡಿ, ಮಕ್ಕಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಓದಿನ ಬಗ್ಗೆ ಪೋಷಕರು, ಶಿಕ್ಷಕರು ಹೆಚ್ಚು ಒತ್ತಡ ಹಾಕುತ್ತಿದ್ದಾರೆ ಎಂದರೆ ಅದು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಕಾಳಜಿ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಪೋಷಕರ ಮತ್ತು ಶಿಕ್ಷಕರ ಬುದ್ಧಿಮಾತನ್ನು ಕೇಳಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಎಸ್. ಲಿಂಗೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ಮಂಗಳಮ್ಮ, ವೈದ್ಯರಾದ ಎಚ್.ಎಲ್. ಪದ್ಮಾವತಿ, ತಿರುಮಲ, ರಕ್ಷಿತ್, ಮನೋಜ್ ಜೆಟ್ಟಿ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸದಾಶಿವ, ಮುಖ್ಯಶಿಕ್ಷಕಿ ರಶ್ಮಿ, ಟ್ರಸ್ಟಿಗಳಾದ ಚಿತ್ರಾ ಲಿಂಗೇಶ್ ಕುಮಾರ್, ಹಿಮಾ, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.