ADVERTISEMENT

ರಾಮನಗರ | ತೋಟದ ಮನೆಯಲ್ಲಿ ಮನುಷ್ಯನ ಬುರುಡೆಗಳು ಪತ್ತೆ: ವ್ಯಕ್ತಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2024, 5:28 IST
Last Updated 11 ಮಾರ್ಚ್ 2024, 5:28 IST
   

ರಾಮನಗರ (ಬಿಡದಿ): ಇಲ್ಲಿನ ಜೋಗರದೊಡ್ಡಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಸೋಮವಾರ ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಲರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಮನುಷ್ಯನ ಬುರುಡೆಗಳನ್ನು ಸಂಗ್ರಹಿಸಿರುವ ಬಲರಾಮ್ ಮಾಟ–ಮಂತ್ರ ಮಾಡುವ ಜೊತೆಗೆ, ರಾತ್ರಿ ಸ್ಮಶಾನದಲ್ಲಿ ಬುರುಡೆ ಪೂಜೆ ಮಾಡುತ್ತಾನೆ ಎಂದು ಗ್ರಾಮಸ್ಥರು ಪೊಲೀಸರಿಗೆ ದೂರು ಕೊಟ್ಟಿದ್ದರು.

ಗ್ರಾಮಸ್ಥರ ದೂರಿನ ಮೇರೆಗೆ ತೋಟದ ಮನೆಗೆ ಭೇಟಿ ನೀಡಿದಾಗ, ಬುರುಡೆಗಳು ಹಾಗೂ ಮೂಳೆಗಳು ಪತ್ತೆಯಾಗಿವೆ. ಭದ್ರಕಾಳಿ ಫೋಟೊ, ಹೋಮಕುಂಡದ ಸುತ್ತ ಬುರುಡೆಗಳನ್ನು ಜೋಡಿಸಿ ಪೂಜೆ ಮಾಡಲಾಗಿದೆ. ಬಲರಾಮ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ಕೆಲ ವರ್ಷಗಳಿಂದ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪೊಲೀಸರು ಮನೆಗೆ ಭೇಟಿ ನೀಡಿದಾಗ ಕಂಡುಬಂದ ಬುರುಡೆಗಳು ಮತ್ತು ಮೂಳೆಗಳ ವಿಡಿಯೊ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.