
ಪ್ರಜಾವಾಣಿ ವಾರ್ತೆ
ಕೊಲೆಯಾದ ನಿಶಾಂತ್.
ರಾಮನಗರ: ತಾಲ್ಲೂಕಿನ ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಗುರುವಾರ ರಾತ್ರಿ ಗುಂಪೊಂದು ಯುವಕನನ್ನು ಲಾಂಗ್ ಮತ್ತು ಮಚ್ಚುಗಳಿಂದ ಹೊಡೆದ ಬರ್ಬರವಾಗಿ ಕೊಲೆ ಮಾಡಿದೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರ ಗ್ರಾಮದ ನಿಶಾಂತ್ (25) ಕೊಲೆಯಾದವರು.
ನಿಶಾಂತ್ ಅವರು ಕರ್ತವ್ಯ ಮುಗಿಸಿ ಊಟ ಮಾಡುವುದಕ್ಕಾಗಿ ತಡರಾತ್ರಿ ಹೋಟೆಲ್‌ಗೆ ಬಂದಿದ್ದರು. ಆಗ ಸ್ಥಳಕ್ಕೆ ಬಂದ ಆರೇಳು ಮಂದಿಯ ಗುಂಪು ಏಕಾಏಕಿ ನಿಶಾಂತ್ ಅವರ ಮೇಲೆರಗಿ ಕೊಲೆ ಮಾಡಿದೆ. ಬಳಿಕ, ಹೋಟೆಲ್‌ನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಸಂಗ್ರಹವಿರುವ ಡಿವಿಆರ್ ಎತ್ತಿಕೊಂಡು ಹೋಗಿದೆ.
ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶ್ವಾನದಳ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.