ನಾಗಪುರದ ದೀಕ್ಷಾಭೂಮಿ
ಪಿಟಿಐ
ರಾಮನಗರ: 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿಯಲ್ಲಿ ಅ. 1ರಂದು (ವಿಜಯದಶಮಿ ದಿನದಂದು) ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಸೆ. 30ರಿಂದ ಅ. 4ರವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಾಗಪುರದ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳಲು ಸಾರಿಗೆ, ರೈಲಿನ ವ್ಯವಸ್ಥೆ ಮೂಲಕ ಕಳುಹಿಸಿ ಕೊಡುವ ಸಲುವಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ದೀಕ್ಷಾ ಭೂಮಿ ಯಾತ್ರಾ https://swd.karnataka.gov.in ಮೂಲಕ ಅವಶ್ಯಕ ದಾಖಲೆಗಳೊಂದಿಗೆ ಸೆ. 9ರೊಳಗೆ ಆನ್‌ಲೈನ್ ಮೂಲಕ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ಪಂಚಾಯತ್ ಭವನ, ರಾಮನಗರ ಹಾಗೂ ಸಂಬಂಧಪಟ್ಟ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲ್ಲೂಕು ಇವರನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.