
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿದ ಪ್ರಯುಕ್ತ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಸಂಸದ ಡಾ.ಸಿ.ಎನ್. ಮಂಜುನಾಥ್ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ ಇತರರು ಹಾಜರಿದ್ದರು
ಚನ್ನಪಟ್ಟಣ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಗರದ ಕೊಲ್ಲಾಪುರಮ್ಮ ದೇವಸ್ಥಾನದ ಆವರಣದಲ್ಲಿ ಬುಧವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸದ ಡಾ.ಸಿ.ಎನ್.ಮಂಜುನಾಥ್, ದೇಶದ ಎಲ್ಲ ವರ್ಗಗಳಿಗೆ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.
‘ದೇಶದ ರಕ್ಷಣೆಯಲ್ಲಿ ಅವರ ಜಾಣ್ಮೆಯ ಆಡಳಿತ ವಿಶ್ವಕ್ಕೆ ಮಾದರಿ. ಇಂದು ಅಮೆರಿಕಾದಂಥ ದೇಶವೇ ನಮ್ಮ ದೇಶದ ಮುಂದೆ ತಲೆಬಾಗುತ್ತಿದೆ. ಇಂತಹ ಪ್ರಧಾನಿಯನ್ನು ಪಡೆದಿರುವ ದೇಶದ ಪ್ರಜೆಗಳು ಪುಣ್ಯವಂತರು’ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ‘ಮೋದಿ ಅವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ದೇಶ ರಕ್ಷಣೆಗೆ ಅವರು ಕೈಗೊಳ್ಳುವ ನಿರ್ಧಾರಗಳು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮತ್ತು ಜೀವಾಮೃತ ರಕ್ತನಿಧಿ ಕೇಂದ್ರ ಸಹಕಾರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಎಲೇಕೇರಿ ರವೀಶ್, ಕೆ.ಟಿ. ಜಯರಾಂ, ಹುಲುವಾಡಿ ದೇವರಾಜು, ವಿಷಕಂಠು, ಸಂತೋಷ್, ಸಿಂಗ್, ಕೋಟೆ ಆನಂದ್, ಸೂರಪ್ಪಗೌಡ, ಮಾಳಗಾಳು ರಾಮು ಸೇರಿದಂತೆ ಹಲವಾರು ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.