ರಾಮನಗರ: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 9ನೇ ಮತ್ತು 11ನೇ ತರಗತಿ ದಾಖಲಾತಿಗಾಗಿ 8 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ನೇರವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ. 23ರವರೆಗೆ ಅವಧಿ ವಿಸ್ತರಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅ. 24ರಿಂದ 26ರವರೆಗೆ ತಿದ್ದುಪಡಿಗೆ ಅವಕಾಶ ಇರುತ್ತದೆ. ಅರ್ಜಿಯನ್ನು ವೆಬ್‌ಸೈಟ್ www.navodaya.gov.in ಮೂಲಕ ಉಚಿತವಾಗಿ ಅಥವಾ ನೇರವಾಗಿ ವಿದ್ಯಾಲಯ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ: 88979200060 ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.