ADVERTISEMENT

ರಾಮನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಶುಚಿತ್ವದ ಕೊರತೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 13:58 IST
Last Updated 7 ಜುಲೈ 2020, 13:58 IST
ಕೋವಿಡ್‌ ಆಸ್ಪತ್ರೆಯೊಳಗಿನ ಕಸ
ಕೋವಿಡ್‌ ಆಸ್ಪತ್ರೆಯೊಳಗಿನ ಕಸ   

ರಾಮನಗರ: ಇಲ್ಲಿನ ಕಂದಾಯ ಭವನದಲ್ಲಿ ಇರುವ ಕೋವಿಡ್‌ ರೆಫರಲ್ ಆಸ್ಪತ್ರೆಯ ಶೌಚಾಲಯಗಳು ಗಬ್ಬೆದ್ದು ನಾರುತ್ತಿದ್ದು, ಈ ಬಗ್ಗೆ ಅಲ್ಲಿನ ರೋಗಿಗಳು ಫೋಟೊ, ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

200 ಹಾಸಿಗೆ ಸಾಮರ್ಥ್ಯವುಳ್ಳ ಈ ತಾತ್ಕಾಲಿಕ ಆಸ್ಪತ್ರೆಯಲ್ಲಿನ ಶೌಚಾಲಯಗಳನ್ನು ವಾರದಿಂದ ಶುಚಿಗೊಳಿಸಿಲ್ಲ. ಎಲ್ಲೆಂದರೆ ಅಲ್ಲಿ ಕಸ ಬಿದ್ದಿದೆ. ಕೈ ತೊಳೆಯುವ ಸಿಂಕ್‌ಗಳು ಸಹ ಶುದ್ಧವಾಗಿಲ್ಲ. ಇದನ್ನು ಬಳಸುವುದಿಂದ ಸೋಂಕು ಇನ್ನಷ್ಟು ಉಲ್ಬಣ ಆಗಬಹುದು ಎಂದು ರೋಗಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸದ್ಯ ಈ ಆಸ್ಪತ್ರೆಯಲ್ಲಿ ನೂರಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.