ADVERTISEMENT

ನಾಲ್ಕನೇ ಸ್ಥಾನ ಪಡೆದ ನೋಟಾ!

​ಪ್ರಜಾವಾಣಿ ವಾರ್ತೆ
Published 23 ಮೇ 2019, 13:48 IST
Last Updated 23 ಮೇ 2019, 13:48 IST

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಮಂದಿ 'ನೋಟಾ' (ಮೇಲಿನವರಲ್ಲಿ ಯಾರೂ ಇಲ್ಲ) ಪ್ರಯೋಗದ ಮೂಲಕ ಅಭ್ಯರ್ಥಿಗಳ ಬಗೆಗಿನ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

ಕ್ಷೇತ್ರದಲ್ಲಿ ಒಟ್ಟಾರೆ 12,461 ನೋಟಾ ಮತಗಳು ಚಲಾವಣೆ ಆಗಿವೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಬಿಎಸ್ ಪಿ ನಂತರ ಮತದಾರರ ಆದ್ಯತೆ ‘ನೋಟಾ’ ಆಗಿದೆ. ಕ್ಷೇತ್ರದಲ್ಲಿ ಈ ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರ 12 ಅಭ್ಯರ್ಥಿಗಳೂ ಕಣದಲ್ಲಿ ಇದ್ದರು.

ಪಿರಮಿಡ್ ಪಾರ್ಟಿ ಆಫ್ ಇಂಡಿಯಾ, ರಿಪಬ್ಲಿಕನ್ ಸೇನಾ ಪಕ್ಷ, ಉತ್ತಮ ಪ್ರಜಾಕೀಯ ಪಾರ್ಟಿ, ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಸರ್ವ ಜನತಾ ಪಾರ್ಟಿ ಸೇರಿದಂತೆ ಹಲವು ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಫಲವಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.