
ಪ್ರಜಾವಾಣಿ ವಾರ್ತೆ
ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಮೂನೆ– 19ರಲ್ಲಿ ಅರ್ಜಿ ಸ್ವೀಕರಿಸಲು ನ. 6 ಕೊನೆಯ ದಿನವಾಗಿದೆ. ನ. 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟ ಮಾಡಲಾಗುತ್ತದೆ. ನ. 25ರಿಂದ ಡಿ. 10ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಡಿ. 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇದುವರೆಗೂ ನಮೂನೆ– 19ರ ಅರ್ಜಿಯನ್ನು ಸಲ್ಲಿಸದೆ ಇರುವವರು ತಹಶೀಲ್ದಾರ್ ಕಚೇರಿ ಅಥವಾ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿದ ಪ್ರತಿಯನ್ನು ತಾಲ್ಲೂಕು ಕಚೇರಿಗೆ ನ. 6ರೊಳಗೆ ಸಲ್ಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.