ADVERTISEMENT

ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆಗೆ ಕಬಡ್ಡಿ ಆಯ್ಕೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2023, 7:14 IST
Last Updated 7 ನವೆಂಬರ್ 2023, 7:14 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆಗೆ ಪ್ರಚಲಿತ ಕ್ರೀಡೆಯನ್ನು ಗುರುತಿಸುವ ಸಲುವಾಗಿ ಸಭೆ ನಡೆಯಿತು
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆಗೆ ಪ್ರಚಲಿತ ಕ್ರೀಡೆಯನ್ನು ಗುರುತಿಸುವ ಸಲುವಾಗಿ ಸಭೆ ನಡೆಯಿತು   

ರಾಮನಗರ: ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆಯಡಿ ರಾಮನಗರ ಜಿಲ್ಲೆಗೆ ಪ್ರಸಿದ್ಧ ಕ್ರೀಡೆ ಕಬಡ್ಡಿಯನ್ನು ಆಯ್ಕೆ ಮಾಡುವುದು ಸೂಕ್ತವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಅಭಿಪ್ರಾಯಪಟ್ಟರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆಗೆ ಜಿಲ್ಲೆಯಲಿರುವ ಪ್ರಚಲಿತ ಕ್ರೀಡೆಯನ್ನು ಗುರುತಿಸುವ ಸಲುವಾಗಿ ಜಿಲ್ಲಾ ಕ್ರೀಡಾಂಗಣ ವ್ಯವಸ್ಥಾಪಕ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಥಳೀಯವಾಗಿ ಪ್ರಸಿದ್ಧಗೊಂಡ ಕ್ರೀಡೆಗಳು ಹಾಗೂ ಆ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಮತ್ತಷ್ಟು ಪ್ರತಿಭಾವಂತರನ್ನಾಗಿಸುವ ನಿಟ್ಟಿನಲ್ಲಿ ಒಂದು ಜಿಲ್ಲೆಗೆ ಒಂದು ಕ್ರೀಡೆ ಯೋಜನೆ ಅತ್ಯಂತ ಉಪಯುಕ್ತವಾಗಿದೆ. ಜಿಲ್ಲೆಯ ಕಬಡ್ಡಿ ಕ್ರೀಡಾಪಟುಗಳು ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಬಡ್ಡಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದರು.\

ADVERTISEMENT

ದೇಶ ಹಾಗೂ ರಾಜ್ಯದ ಪ್ರಸಿದ್ಧ ಕ್ರೀಡೆ ಕಬಡ್ಡಿಯಾಗಿರುವುದರಿಂದ ಹೆಚ್ಚು ಜಿಲ್ಲೆಗಳಲ್ಲಿ ಇದೇ ಕ್ರೀಡೆಯನ್ನೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ಆದ ಕಾರಣ ಕಬಡ್ಡಿಗೆ ಪರ್ಯಾಯವಾಗಿ ವಾಲಿಬಾಲ್ ಅನ್ನು ಸಹ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಎನ್.ಎಸ್.ಎಸ್. ಸಂಯೋಜನಾಧಿಕಾರಿ, ನೆಹರು ಯುವ ಕೇಂದ್ರದ ಅಧಿಕಾರಿ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.