ADVERTISEMENT

ರಾಮನಗರ | ಅರೆಕಾಲಿಕ ಶಿಕ್ಷಕ ಹುದ್ದೆಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 2:21 IST
Last Updated 16 ಆಗಸ್ಟ್ 2025, 2:21 IST
   

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಬರುವ ಸರ್ಕಾರಿ ಬಾಲಕರ, ಬಾಲಕಿಯರ ಬಾಲಮಂದಿರಗಳಿಗೆ ಅರೆಕಾಲಿಕ ಪಾಠ ಹೇಳುವ ಶಿಕ್ಷಕರು-2 ಹಾಗೂ ದೈಹಿಕ/ಯೋಗ ಶಿಕ್ಷಕರು-1 ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ರಾಮನಗರ ತಾಲ್ಲೂಕಿನ ಬಿಳಗುಂಬ ರಸ್ತೆಯ ಸಂಜೀವಿನ ವಸತಿ ಬಡಾವಣೆಯಲ್ಲಿರುವ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ದ್ಯಾವರಸೇಗೌಡನದೊಡ್ಡಿಯ ಒಕ್ಕಲಿಗರ ಭವನದಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಕಾರ್ಯನಿರ್ವಹಿಸುತ್ತಿದೆ.

ಈ ಸಂಸ್ಥೆಗಳಲ್ಲಿ ಕ್ರಮವಾಗಿ 6ರಿಂದ 18 ವರ್ಷಗಳ ವಯೋಮಿತಿಯ ಹೆಣ್ಣು ಹಾಗೂ ಗಂಡು ಮಕ್ಕಳಿದ್ದಾರೆ. ಇವರಿಗೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸರ್ಕಾರಿ ಬಾಲಕರ/ಬಾಲಕಿಯರ ಬಾಲಮಂದಿರಕ್ಕೆ ಅರೆಕಾಲಿಕ ಪಾಠ ಹೇಳುವ ಶಿಕ್ಷಕರು-2 (ಎಜುಕೇಟರ್ ಬಿ.ಇಡಿ) ಹಾಗೂ ಸರ್ಕಾರಿ ಬಾಲಕರ/ಬಾಲಕಿಯರ ಬಾಲಮಂದಿರಕ್ಕೆ, ದೈಹಿಕ/ಯೋಗ, ಸಂಗೀತ/ಕ್ರಾಪ್ಟ್ ಸಂಬಂಧಿಸಿದ ಶಿಕ್ಷಕರು-1 ಅವಶ್ಯಕತೆ ಇದೆ.

ADVERTISEMENT

ಶಿಕ್ಷಕರ ಸೇವೆಗೆ ₹10 ಸಾವಿರ ಗೌರವಧನ ನೀಡಲಾಗುವುದು. ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ಯಾವುದೇ ಅಭ್ಯರ್ಥಿಗಳು ಆ. 29ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಪಡೆಯಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಸಂಕೀರ್ಣ, ಕೊಠಡಿ ಸಂಖ್ಯೆ:307, 2ನೇ ಮಹಡಿ, ಬೆಂಗಳೂರು ದಕ್ಷಿಣ ಜಿಲ್ಲೆ. ದೂ: 080-29655500, 9844728807 ಅಥವಾ 9880307587 ಸಂಪರ್ಕಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.