
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಖಜಾನೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೊ ಕಾನ್ಫರೆನ್ಸ್ ಹಾಲ್‌ನಲ್ಲಿ ಪಿಂಚಣಿ ಅದಾಲತ್ ಹಾಗೂ ಜಿಪಿಎಫ್ ಅದಾಲತ್ ಜರುಗಿತು.
ಕಾರ್ಯಕ್ರಮಕ್ಕೆ ಬೆಂಗಳೂರಿನ ಮಹಾಲೇಖಪಾಲ ರಾಜೀವ್ ಕುಮಾರ್ ಸಿಂಗ್ ಕಾರ್ಯ ಅವರು ಚಾಲನೆ ನೀಡಿದರು. ಪಿಂಚಣಿಗೆ ಸಂಬಂಧಿಸಿದಂತೆ ಸಾಕಷ್ಟು ಸಲಹೆ ಸೂಚನೆಗಳನ್ನು ಹಾಗೂ ವಿಚಾರಗಳನ್ನು ಹಂಚಿಕೊಂಡರು. ಪಿಂಚಣಿದಾರರು ತಮ್ಮ ಅಹವಾಲುಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.
ಬೆಂಗಳೂರಿನ ಪಿಂಚಣಿ ವಿಭಾಗದ ಡೆಪ್ಯೂಟಿ ಅಕೌಂಟೆಂಟ್ ಜನರಲ್ ಸಚಿನ್ ಕೌಶಿಕ್, ಹಿರಿಯ ಲೆಕ್ಕಾಧಿಕಾರಿ ನಾಗಜ್ಯೋತಿ, ಲೆಕ್ಕಾಧಿಕಾರಿ ಶ್ರೀಕಾಂತ, ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಹೆಚ್ಚುವರಿ ನಿರ್ದೇಶಕಿ ಯಶೋಧ, ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಜಯಂತ್, ಎಜೆಎಂ, ಸಿಪಿಪಿಸಿ, ರಾಷ್ಟ್ರೀಕೃತ ಬ್ಯಾಂಕ್‌ಗಳ ವ್ಯವಸ್ಥಾಪಕರು, ಸಿಬ್ಬಂದಿ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.