ADVERTISEMENT

ರಾಮನಗರ | 29ಕ್ಕೆ ಪಿಂಚಣಿ, ಜಿಪಿಎಫ್ ಅದಾಲತ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2025, 8:30 IST
Last Updated 22 ಅಕ್ಟೋಬರ್ 2025, 8:30 IST
   

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಹಾಲ್‌ನಲ್ಲಿ ಅ. 29ರಂದು ಬೆಳಿಗ್ಗೆ 10.30ಕ್ಕೆ ಪಿಂಚಣಿ ಅದಾಲತ್ ಹಾಗೂ ಜಿಪಿಎಫ್ ಅದಾಲತ್ ಕಾರ್ಯಕ್ರಮನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಹಾಲೇಖಪಾಲರ ಕಚೇರಿ ಅಧಿಕಾರಿ, ಸಿಬ್ಬಂದಿ, ರಾಷ್ಟ್ರೀಕೃತ ಬ್ಯಾಂಕ್ ಶಾಖೆಗಳಾದ ಎಸ್‌ಬಿಐ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾದ ಸಿಪಿಪಿಸಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಖಜಾನೆಯ ಹೆಚ್ಚುವರಿ ನಿರ್ದೇಶಕರು ಭಾಗವಹಿಸಿ ಪಿಂಚಣಿ ಪಾವತಿಯ ಕುಂದುಕೊರತೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಖಜಾನೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT