ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಅಚ್ಚಲು ಗೇಟ್‌ನ ರಾಷ್ಟ್ರೀಯ ಹೆದ್ದಾರಿಯನ್ನು ಬೈಕ್‌ನಲ್ಲಿ ದಾಟುವ ವೇಳೆ ಕಾರು ಡಿಕ್ಕಿ ಹೊಡೆದು ತೋಟಳ್ಳಿಯ ಮೂಲೆಮನೆ ಪಾಪಣ್ಣ(63) ಎಂಬುವರು ಶನಿವಾರ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಉಬ್ಬುಗಳನ್ನು ಹಾಕಿ ಅಪಘಾತಗಳನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ನಾಗರಿಕರು ಪ್ರತಿಭಟನೆ ನಡೆಸಿದರು.
ಅಪಘಾತವಾಗುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದರು. ಮೂರು ದಿನಗಳ ಹಿಂದೆ ಟ್ಯಾಂಕರ್ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಧಿಕಾರಿಗಳು ಸುರಕ್ಷತಾ ಕ್ರಮವಹಿಸದಿರುವುದೇ ಇದಕ್ಕೆ ಕಾರಣ ಎಂದು ದೂರಿದರು.
ಸ್ಥಳಕ್ಕೆ ಭೇಟಿ ನೀಡಿದ ಸಾತನೂರು ಎಸ್.ಐ. ಮುರಳಿ, ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಮಾತನಾಡಿ ರಸ್ತೆ ಉಬ್ಬುಗಳನ್ನು ಹಾಕಿಸುವ ಬಗ್ಗೆ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.