ADVERTISEMENT

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ

ಡಿಸಿಎಂ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ ಸಭೆ

​ಪ್ರಜಾವಾಣಿ ವಾರ್ತೆ
Published 18 ಮೇ 2021, 15:04 IST
Last Updated 18 ಮೇ 2021, 15:04 IST
ರಾಯಚೂರಿನ ರಿಮ್ಸ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ರಾಯಚೂರಿನ ರಿಮ್ಸ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

ರಾಯಚೂರು: ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಅವರ ಸಲಹೆ ಆಧರಿಸಿ ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ತಡೆಗಾಗಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ರಚಿಸಿದ ಕೋವಿಡ್ ಆರೈಕೆ ಹಾಗೂ ಪ್ರತ್ಯೇಕ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರೊನಾ ಸಂಪರ್ಕ ನಿಯಂತ್ರಣ ಮಾಡುವುದಕ್ಕಾಗಿ ಕೋವಿಡ್ ಕೇರ್ ಸೆಂಟರ್‌ಗಳ ಆರಂಭ ಮಾಡಲಾಗಿದ್ದು, ಪಾಸಿಟಿವ್‌ ಇರುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ತರಲು ಪ್ರಯತ್ನ ಮಾಡಲಾಗುತ್ತಿದೆ. ಒಂದು ವೇಳೆ ಅದಕ್ಕೆ ಒಪ್ಪದಿದ್ದಲ್ಲೀ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಅವರನ್ನು ಮನೆಯಿಂದ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದರು.

ADVERTISEMENT

ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ವೆಂಕಟರಾವ್ ನಾಡಗೌಡ, ಕೆ. ಶಿವನಗೌಡ ನಾಯಕ, ಡಾ. ಶಿವರಾಜ್ ಪಾಟೀಲ, ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.