ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಹಳ್ಳಿ ಹಾಗೂ ಮಂಗಾಡಹಳ್ಳಿ ಗ್ರಾಮಗಳ ಕೆರೆ ಏರಿ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದು ವಾಹನ ಸವಾರರಿಗೆ ಕಿರಿಕಿರಿ ಎದುರಾಗಿದೆ ಎಂದು ಮುಖಂಡ ಕೋಡಂಬಹಳ್ಳಿ ನಾಗರಾಜು ಆರೋಪಿಸಿದ್ದಾರೆ.
ಚನ್ನಪಟ್ಟಣ ಹಲಗೂರು ಮುಖ್ಯರಸ್ತೆಯಾಗಿರುವ ಈ ಕೆರೆ ಏರಿ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನ ಸಂಚರಿಸುತ್ತವೆ. ಹಲವು ದಿನಗಳಿಂದ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದಿದೆ. ಇದರಿಂದ ರಸ್ತೆ ಕಿರಿದಾಗಿದೆ. ಜತೆಗೆ ಅಲ್ಲಲ್ಲಿ ತಿರುವು ಇರುವ ಕಾರಣ ಎದುರಿನಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಸಣ್ಣಪುಟ್ಟ ಅಪಘಾತ ಸಂಭವಿಸಿ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.
ಇದೇ ರೀತಿ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದು ವಾಹನ ಸವಾರರಿಗೆ ತೊಂದರೆಯಾಗಿದೆ. ಅಧಿಕಾರಿಗಳು ಗಮನ ಸೆಳೆದರೂ ಪ್ರಯೋಜನವಾಗಿರಲಿಲ್ಲ. ಮಂಗಾಡಹಳ್ಳಿ ಮುಖಂಡ ಎಂ.ಜೆ.ಮಹೇಶ್ ಸ್ವಂತ ಹಣದಲ್ಲಿ ಜೆಸಿಬಿ ಮೂಲಕ ಗಿಡಗಂಟಿ ತೆರವುಗೊಳಿಸಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಗಮನಹರಿಸಿ ಶೀಘ್ರ ಗಿಡಗಂಟಿ ತೆರವುಗೊಳಿಸಬೇಕು ಎಂದು ಸ್ಥಳೀಯರಾದ ಕೆ.ಎಸ್.ನಾಗರಾಜು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.