ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿರುವ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಮತ್ತು ದೇವಾಲಯದ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಿಸಿ, ಆ. 15ರಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಗುರುವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿರುವ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಒಳಾಂಗಣದಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಬಳಸುವ ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಕೆಟ್, ಪ್ಲಾಸ್ಟಿಕ್ ಜಗ್, ಇತರ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಹಾಗೂ ದೇವಸ್ಥಾನಗಳ ಪ್ರದೇಶ ವ್ಯಾಪ್ತಿಯಲ್ಲಿ ಉಪಯೋಗಿಸಿ ಎಸೆಯುವಂತಹ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಚಿಪ್ಸ್ ಪ್ಯಾಕೇಟ್, ಗುಟ್ಕಾ ಪ್ಯಾಕೇಟ್ ಹಾಗೂ ಇದೇ ರೀತಿ ತಿನ್ನಲು ಯೋಗ್ಯವೆಂದು ಪ್ಯಾಕ್ ಮಾಡಿರುವಂತಹ ಇತರೆ ಎಲ್ಲಾ ರೀತಿ ಪ್ಲಾಸ್ಟಿಕ್ ಪ್ಯಾಕೇಟ್‌ಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಸಹ ಆದೇಶದಲ್ಲಿ ನಿರ್ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.