ಮಾಗಡಿ: ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜೆ.ಆರ್.ರವೀಶ್ ಮತ್ತು ಉಪಾಧ್ಯಕ್ಷರಾಗಿ ಹನುಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ನಡೆದ ಚುನಾವಣೆಗೆ ಎರಡೂ ಸ್ಥಾನಗಳಿಗೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಚುನಾವಣಾಧಿಕಾರಿ ವೆಂಕಟೇಶ್ ಇಬ್ಬರ ಅವಿರೋಧ ಆಯ್ಕೆ ಘೋಷಿಸಿದರು. ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.
ರೈತರಿಗೆ ಸರ್ಕಾರದಿಂದ ಸಿಗಬೇಕಾದ ಸಾಲ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ಕೊಡಿಸಲಾಗುವುದು ಎಂದು ನೂತನ ಅಧ್ಯಕ್ಷ ಜೆ.ಆರ್. ರವೀಶ್ ಭರವಸೆ ನೀಡಿದರು.
ಪ್ರತಿ ವಾರ್ಷಿಕ ಸಭೆ ಮತ್ತು ಬ್ಯಾಂಕಿನ ವ್ಯವಹಾರಗಳ ಬಗ್ಗೆ ಮಾಹಿತಿ ತಲುಪಿಸಿ ಮುಂದಿನ ಬಾರಿ ಎಲ್ಲಾ ಸದಸ್ಯರು ಮತದಾನ ಹಕ್ಕು ಸಿಗುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಕೆ. ಧನಂಜಯ, ಎಚ್.ಎನ್. ಅಶೋಕ್, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ನಿರ್ಮಲ ಸೀತಾರಾಂ, ಕೆ.ಜಿ. ನಾಗರಾಜು, ಹರಣಿ ದೇವೇಂದ್ರಪ್ಪ, ವೇಣುಗೋಪಾಲ್, ತಿಮ್ಮೇಗೌಡ, ಚಂದ್ರೇಗೌಡ, ಚನ್ನಗಂಗಯ್ಯ, ಯಶೋಧ, ಸಿದ್ದೇಗೌಡ, ಶಶಾಂಕ್, ಟಿ.ಜಿ.ಭವ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.