ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಹಾಸ್ಟೆಲ್‌ನಿಂದ ಹದಿನೈದು ವರ್ಷದ ವಿದ್ಯಾರ್ಥಿನಿಯನ್ನು ಕರೆದೊಯ್ದ 36 ವರ್ಷದ ವ್ಯಕ್ತಿಯೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಾರ್ಚ್ 11ರಂದು ನಡೆದಿರುವ ಘಟನೆ ಕುರಿತು ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
ಹಾಸ್ಟೆಲ್‌ಗೆ ಬಂದಿದ್ದ ವ್ಯಕ್ತಿ, ತಾನು ವಿದ್ಯಾರ್ಥಿನಿಯ ಅಣ್ಣ ಎಂದು ಹಾಸ್ಟೆಲ್ ಸಿಬ್ಬಂದಿಯನ್ನು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರುವುದಾಗಿ ಹೇಳಿ ಆಕೆಯನ್ನು ಮಾವಿನ ತೋಪಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಎರಡು ಗಂಟೆಯಾದರೂ ಆತ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಾರದಿದ್ದರಿಂದ ಅನುಮಾನಗೊಂಡ ಹಾಸ್ಟೆಲ್ ಸಿಬ್ಬಂದಿ, ಕುಟುಂಬದವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಗಾಬರಿಗೊಂಡ ಪೋಷಕರು ಹಾಸ್ಟೆಲ್‌ಗೆ ಬಂದು ತಮ್ಮ ಪುತ್ರಿಯನ್ನು ವಿಚಾರಿಸಿದಾಗ, ಆತ ಲೈಂಗಿಕ ದೌರ್ಜನ್ಯ ಎಸಗಿರುವುದು ಗೊತ್ತಾಗಿದೆ. ಬಳಿಕ ಅವರು ಠಾಣೆಗೆ ಬಂದು ದೂರು ಕೊಟ್ಟರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ. ಬಾಲಕಿ ಮತ್ತು ಆರೋಪಿ ಒಂದೇ ಉರಿನವರಾಗಿದ್ದು, ಒಂದು ವರ್ಷದಿಂದ ಆತ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.