
ಪ್ರಜಾವಾಣಿ ವಾರ್ತೆ
ಜೈಲು (ಪ್ರಾತಿನಿಧಿಕ ಚಿತ್ರ)
ರಾಮನಗರ: ದಶಕ ಹಿಂದೆ ಬಾಲಕಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣದಲ್ಲಿ ಇಲ್ಲಿನ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ 12ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದವರು ಮುನಿಯರಪ್ಪ ಅಲಿಯಾಸ್ ವರದರಾಜು. 2015ರಲ್ಲಿ ಅವರ ವಿರುದ್ಧ ಕಗ್ಗಲೀಪುರ ಪೊಲೀಸರು ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯ ಅಪರಾಧಿಗೆ ₹15 ಸಾವಿರ ದಂಡ ವಿಧಿಸಿದೆ. ಈ ದಂಡದ ಮೊತ್ತದಲ್ಲಿ ₹10 ಬಾಲಕಿಗೆ ನೀಡುವಂತೆ ಆದೇಶಿಸಿದೆ.
ನ್ಯಾಯಾಧೀಶೆ ಕೆ.ಎನ್.ಸರಸ್ವತಿ ಈ ತೀರ್ಪು ನೀಡಿದರು. ಪ್ರಾಸಿಕ್ಯೂಷನ್ ಪರವಾಗಿ ಪುಷ್ಪಲತಾ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.