ADVERTISEMENT

ಮಾಗಡಿ: ಪೊಲೀಸ್‌ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 3:16 IST
Last Updated 25 ಏಪ್ರಿಲ್ 2021, 3:16 IST
ಮಾಗಡಿ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು
ಮಾಗಡಿ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು   

ಮಾಗಡಿ: ತಾಲ್ಲೂಕಿನಾದ್ಯಂತ ವಾರಾಂತ್ಯದ ಕರ್ಫ್ಯೂ ಶನಿವಾರ ಆರಂಭವಾಯಿತು.

ಅಂಗಡಿಮುಗ್ಗಟ್ಟುಗಳು ಮುಚ್ಚಿದ್ದವು. ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಸಾರಿಗೆ ಬಸ್‌ಗಳು ಸಂಚರಿಸಿದವು. ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಪಟ್ಟಣದಲ್ಲಿ ವರ್ತಕರು ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಸಬ್‌ ಇನ್‌ಸ್ಪೆಕ್ಟರ್‌ ಶ್ರೀಕಾಂತ್‌ ನೇತೃತ್ವದ ಪೊಲೀಸ್‌ ಸಿಬ್ಬಂದಿ ರಸ್ತೆಯಲ್ಲಿ ಸಂಚರಿಸುತ್ತಿದ್ದ 12 ದ್ವಿಚಕ್ರವಾಹನಗಳು ಮತ್ತು 3 ಕಾರುಗಳನ್ನು ವಶಕ್ಕೆ ಪಡೆದರು.

ಏ. 25ರಂದು ಬೆಳಿಗ್ಗೆ 6ರಿಂದ 10 ಗಂಟೆ ತನಕ ವ್ಯಾಪಾರ ವಹಿವಾಟು ನಡೆಸಬಹುದು. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ವಹಿವಾಟು ಸ್ಥಗಿತಗೊಳಿಸಿ, ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಮನೆಯಲ್ಲಿರಬೇಕು. ಕರ್ಫ್ಯೂ ಉಲ್ಲಂಘಿಸಿ ಬೀದಿಗಿಳಿದರೆ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಮೇ 4ವರೆಗೆ ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಿಎಸ್‌ಐ ಶ್ರೀಕಾಂತ್‌ ಮನವಿ ಮಾಡಿದರು.

ADVERTISEMENT

ಡಿವೈಎಸ್‌ಪಿ ಓಂಪ್ರಕಾಶ್‌ ಮತ್ತು ಸರ್ಕಲ್‌ ಇನ್‌ಸ್ಪೆಕ್ಟರ್‌ ಎ.ಪಿ. ಕುಮಾರ್‌ ಮಾರ್ಗದರ್ಶನದಲ್ಲಿ ಪೊಲೀಸರು ಬಿಗಿಬಂದೋಬಸ್ತ್‌ ಏರ್ಪಡಿಸಿದ್ದಾರೆ. ಕೋವಿಡ್‌ ಸೋಂಕು ಹರಡದಂತೆ ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಮನವಿ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.