ಕನಕಪುರ: ಪಿಒಪಿಯಿಂದ ತಯಾರು ಮಾಡಿದ್ದ ಗೌರಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ನಗರಸಭೆ ಅಧ್ಯಕ್ಷ ಮತ್ತು ಪೌರಾಯುಕ್ತ ದಾಳಿ ನಡೆಸಿ ಎರಡು ಪಿಒಪಿ ಗಣೇಶ ಮೂರ್ತಿಯನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ನಗರಸಭೆ ಅಧ್ಯಕ್ಷೆ ಹೇಮರಾಜು, ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ್ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿದರು.
ಬೂದಿಕೆರೆ ರಸ್ತೆ ಕೃಷ್ಣ ಕಲ್ಯಾಣ ಮಂಟಪ ಬಳಿ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ ಒಂದು ಗಣೇಶ ಮೂರ್ತಿ ಮತ್ತು ಬಸ್ ನಿಲ್ದಾಣದ ಕಾಳಿಕಾಂಬ ದೇವಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಒಂದು ಗಣೇಶ ಮೂರ್ತಿಯನ್ನು ವಶಕ್ಕೆ ಪಡೆದರು.
ದಾಳಿ ಕಾರ್ಯಾಚರಣೆಯಲ್ಲಿ ನಗರಸಭೆ ಆರೋಗ್ಯ ನಿರೀಕ್ಷರಾದ ಮಲ್ಲಿಕಾರ್ಜುನ್ ಶರಣಪ್ಪ, ಶಾಂತರಾಜು, ವೆಂಕಟೇಶ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಪಿಒಪಿ ಗಣೇಶ್ ಕಂಡು ಬಂದರೆ ಗಣೇಶ ಕೂರಿಸಿದವರು ಮತ್ತು ಅದನ್ನು ಮಾರಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೌರಾಯುಕ್ತ ಎಂ.ಎಸ್.ಮಹದೇವ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.