ADVERTISEMENT

ಆನ್‌ಲೈನ್‌ ಕ್ಲಾಸ್‌ ಮಧ್ಯೆ ಅಶ್ಲೀಲ ವಿಡಿಯೊ!

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 6:27 IST
Last Updated 15 ಅಕ್ಟೋಬರ್ 2020, 6:27 IST

ರಾಮನಗರ: ಶಾಲೆಯೊಂದರ ಆನ್‌ಲೈನ್ ಪಾಠದ ಸಂದರ್ಭ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದು, ಈ ಸಂಬಂಧ ರಾಮನಗರ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಚನ್ನಪಟ್ಟಣದ ಕೇಂಬ್ರಿಜ್‌ ಇಂಗ್ಲಿ‌ಷ್‌ ಮಾಧ್ಯಮ ಶಾಲೆಯು ತನ್ನ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್‌ ಮೂಲಕ ತರಗತಿ ನಡೆಸುತ್ತಿತ್ತು. ಸೋಮವಾರ ಆನ್‌ಲೈನ್‌ ಪಾಠದ ಮಧ್ಯೆ ಸುಮಾರು30 ಸೆಕೆಂಡುಗಳ ಅಶ್ಲೀಲ ವಿಡಿಯೊ ಪ್ರಸಾರ ಆಯಿತು ಎನ್ನಲಾಗಿದೆ. ಈ ಕುರಿತು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಸೈಬರ್‌ ಪೊಲೀಸರಲ್ಲಿ ದೂರು ದಾಖಲಾಗಿದೆ.

"ಯಾರೋ ನಮ್ಮ ಶಾಲೆಯ ಆನ್‌ಲೈನ್ ಖಾತೆಯನ್ನು ಹ್ಯಾಕ್ ಮಾಡಿ ವಿಡಿಯೊ ಹರಿಬಿಟ್ಟಿದ್ದಾರೆ. ಇದಕ್ಕೂ ಶಾಲೆಗೂ ಸಂಬಂಧ ಇಲ್ಲ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು’ ಎಂದು ಶಾಲೆಯ ಕಾರ್ಯದರ್ಶಿ ಲಿಂಗೇಶ್‌ಕುಮಾರ್‍ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಅಶ್ಲೀಲ ವಿಡಿಯೊ ಪ್ರಸಾರವಾದ ಕುರಿತು ಸದ್ಯ ಪೊಲೀಸರಿಗೆ ಯಾವುದೇ ಸಾಕ್ಷ್ಯಗಳು ದೊರೆತಿಲ್ಲ. ಹೀಗಾಗಿ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ಒಪ್ಪಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.