ADVERTISEMENT

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 2:44 IST
Last Updated 25 ಫೆಬ್ರುವರಿ 2026, 2:44 IST
   

ರಾಮನಗರ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಜನಾಂಗದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 5ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿಯನ್ನು ಆನ್‌ಲೈನ್ https://ssp.postmatric.karnataka.gov.in ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770005 ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT