ADVERTISEMENT

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 2:39 IST
Last Updated 30 ಜುಲೈ 2025, 2:39 IST
<div class="paragraphs"><p>ಆಹ್ವಾನ</p></div>

ಆಹ್ವಾನ

   

ರಾಮನಗರ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಜನಾಂಗದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‌ಸೈಟ್ ವಿಳಾಸ: https://ssp.postmatric.karnataka.gov.in/ ಮೂಲಕ ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಹಾಯವಾಣಿ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ postmatrichelp@gov.in ಅಥವಾ ದೂ: 1902 ಸಂಪರ್ಸಬೇಕು ಎಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.