ರಾಮನಗರ: ಚನ್ನಪಟ್ಟಣದ 11ಕೆ.ವಿ ಮಾರ್ಗ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜ.30 ರಂದು ಚನ್ನಪಟ್ಟಣದ ಎಫ್-7 ಎಸ್.ಎಸ್.ಮಿಲ್ ಹಾಗೂ ಇತರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಚನ್ನಪಟ್ಟಣದ ಆವರ್ತಪುರ, ಕೆ.ಎಚ್.ಬಿ. ಕಾಲೋನಿ, ಚರ್ಚ್ ರಸ್ತೆ, ಮಂಜುನಾಥ ಬಡಾವಣೆ (1ನೇ ಕ್ರಾಸ್ ಹಾಗೂ 2ನೇ ಕ್ರಾಸ್) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ಚನ್ನಪಟ್ಟಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.