ADVERTISEMENT

ಹುಲಿಕಲ್‌ ಗ್ರಾಪಂ ಅಧ್ಯಕ್ಷೆ ಪ್ರೇಮಾ ವೆಂಕಟೇಶ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 13:50 IST
Last Updated 25 ಅಕ್ಟೋಬರ್ 2019, 13:50 IST
ಮಾಗಡಿ ತಾಲ್ಲೂಕಿನ ಹುಲಿಕಲ್‌ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ವೆಂಕಟೇಶ್‌ ಅವರನ್ನು ಸದಸ್ಯರು ಅಭಿನಂದಿಸಿದರು
ಮಾಗಡಿ ತಾಲ್ಲೂಕಿನ ಹುಲಿಕಲ್‌ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ವೆಂಕಟೇಶ್‌ ಅವರನ್ನು ಸದಸ್ಯರು ಅಭಿನಂದಿಸಿದರು   

ಕುದೂರು(ಮಾಗಡಿ): ಹುಲಿಕಲ್‌ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪ್ರೇಮಾ ವೆಂಕಟೇಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಂಗನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧ್ಯಕ್ಷರಾಗಿದ್ದ ನಾಗರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಪ್ರೇಮಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು ಎಂದರು.

ಪ್ರೇಮಾ ವೆಂಕಟೇಶ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದರು.

ADVERTISEMENT

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ರಾಜಣ್ಣ, ಕಾಂಗ್ರೆಸ್‌ ಮುಖಂಡರಾದ ಶ್ರೀಗಿರಿಪುರ ಪ್ರಕಾಶ್‌, ಕುದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ.ವೆಂಕಟೇಶ್, ಉಪಾಧ್ಯಕ್ಷ ಡಿ.ರಂಗಸ್ವಾಮಿ, ಹುಲಿಕಲ್ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳ, ಸದಸ್ಯರಾದ ಅನುಸೂಯ, ಕೆಂಪರತ್ನಮ್ಮ, ನಂಜುಂಡಯ್ಯ, ಲೋಕೇಶ್‌, ಗೌರಮ್ಮ, ಸಾಬೀರ್‌ ಪಾಷಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮಾ, ಕಾರ್ಯದರ್ಶಿ ಬೈಲಪ್ಪ ಅಭಿನಂದಿಸಿದರು. ಪಟಾಕಿ ಸಿಡಿಸಿದರು. ಸಿಹಿ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.