ADVERTISEMENT

‘ಶುದ್ಧ ನೀರು ಘಟಕ ನಿರ್ಮಾಣಕ್ಕೆ ಆದ್ಯತೆ’

ವಿವಿಧ ಕಾಮಗಾರಿಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿರಿಂದ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 15:46 IST
Last Updated 2 ಜೂನ್ 2020, 15:46 IST
ಕವಣಾಪುರ ಗ್ರಾಮದ ಪಟ್ಲದಮ್ಮ ದೇವಾಲಯದ ಮುಂಭಾಗ ನಿರ್ಮಾಣ ಮಾಡಿರುವ ಕಲ್ಯಾಣಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಮಂಗಳವಾರ ಬಾಗಿನ ಅರ್ಪಿಸಿದರು
ಕವಣಾಪುರ ಗ್ರಾಮದ ಪಟ್ಲದಮ್ಮ ದೇವಾಲಯದ ಮುಂಭಾಗ ನಿರ್ಮಾಣ ಮಾಡಿರುವ ಕಲ್ಯಾಣಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಮಂಗಳವಾರ ಬಾಗಿನ ಅರ್ಪಿಸಿದರು   

ರಾಮನಗರ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಕೊಡುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲೂ ನೀರಿನ ಘಟಕಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಕಪ್ಪನಹಳ್ಳಿ ಗ್ರಾಮದಲ್ಲಿ ₹5ಲಕ್ಷ ವೆಚ್ಚದ ಶುದ್ದ ನೀರು ಘಟಕಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ ಹಲವು ಗ್ರಾಮಗಳಲ್ಲಿ ಶುದ್ಧನೀರು ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಘಟಕಗಳು ಇಲ್ಲದ ಗ್ರಾಮಗಳಿಗೆ ಘಟಕಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿದ್ದವು. ಈಗ ಅವುಗಳಿಗೆ ಚಾಲನೆ ಸಿಕ್ಕಿದೆ ಎಂದರು.

ADVERTISEMENT

ರಾಜ್ಯದಲ್ಲಿ ಕೋವಿಡ್‌-೧೯ ಸೋಂಕಿತರ ಸಂಖ್ಯೆ ಹೆಚ್ಚಿದ್ದರೂ ಜಿಲ್ಲೆಯಲ್ಲಿ ಎರಡು ಪ್ರಕರಣಗಳು ಮಾತ್ರ ವರದಿಯಾಗಿವೆ. ಸಾರ್ವಜನಿಕರು ಆದಷ್ಟು ಜಾಗ್ರತೆ ವಹಿಸಬೇಕು. ಅನವಶ್ಯಕ ದೂರಪ್ರಯಾಣ ಮಾಡಬಾರದು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಚ್ಚರಿಕೆ ವಹಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನರೇಗಾ ಯೋಜನೆಯಲ್ಲಿ ನಿರ್ಮಾಣಗೊಂಡ ಉದ್ಯಾನವನ, 14ನೇ ಹಣಕಾಸು ಯೋಜನೆಯಲ್ಲಿ ₹1ಲಕ್ಷ ವೆಚ್ಚದಲ್ಲಿ ನವೀಕರಣಗೊಂಡ ಗ್ರಂಥಾಲಯ ಕಟ್ಟಡ ಉದ್ಘಾಟಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಪಕ್ಷದ ವಕ್ತಾರ ಬಿ. ಉಮೇಶ್, ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಅಶ್ವಥ್, ಮುಖಂಡ ಎಚ್.ಸಿ. ರಾಜಣ್ಣ, ಗ್ರಾ.ಪಂ. ಅಧ್ಯಕ್ಷ ಸುರೇಶ್, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜು, ಗ್ರಾ.ಪಂ ಸದಸ್ಯರಾದ ಜಯರಾಮು, ಜ್ಯೋತಿಲಕ್ಷ್ಮಿ ಪುಟ್ಟಸ್ವಾಮಿಗೌಡ, ಶಂಕರ್, ಶ್ರೀನಿವಾಸ್ ಮುಖಂಡರಾದ ಆರ್. ಮೂರ್ತಿ ನಾಯಕ್, ಎನ್. ಚೆಲುವರಾಜು, ಕೆ. ನವೀನ್, ಕೆ. ಪಾರ್ಥಸಾರಥಿ, ಪಿಡಿಒ ಜಯಶಂಕರ್, ಬಿಲ್ ಕಲೆಕ್ಟರ್ ಗಿರೀಶ್, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್, ಜಯಕುಮಾರ್, ನರೇಂದ್ರ, ಕೃಷ್ಣ, ಸತೀಶ್ ಇದ್ದರು.

ಕಲ್ಯಾಣಿಗೆ ಬಾಗಿನ: ನಂತರ ಕೈಲಾಂಚ ಗ್ರಾಮ ಪಂಚಾಯಿತಿ ಕವಣಾಪುರ ಗ್ರಾಮದ ಪಟ್ಲದಮ್ಮ ದೇವಾಲಯದ ಮುಂಭಾಗ ನರೇಗಾ ಯೋಜನೆಯಲ್ಲಿ ₹20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಕಲ್ಯಾಣಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಬಾಗಿನ ಅರ್ಪಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಭಾವತಿ ಶಿವಲಿಂಗಯ್ಯ, ಗ್ರಾ.ಪಂ. ಅಧ್ಯಕ್ಷ ಆರ್. ಪಾಂಡುರಂಗ, ಉಪಾಧ್ಯಕ್ಷೆ ಭವ್ಯ ಸುರೇಂದ್ರ, ಮಾಜಿ ಉಪಾಧ್ಯಕ್ಷರಾದ ವೆಂಕಟೇಶ್, ಜಿ.ಪಿ. ಗಿರೀಶ್ ವಾಸು ಸದಸ್ಯರಾದ ವರದರಾಜು, ಸುಶೀಲಾ, ಗೋಪಾಲನಾಯಕ, ಪಿಡಿಓ ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.