ADVERTISEMENT

ಪಾಕ್‌ ಪರ ಘೋಷಣೆ: ಶಾಸಕರ ಖಂಡನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 13:57 IST
Last Updated 21 ಫೆಬ್ರುವರಿ 2020, 13:57 IST

ರಾಮನಗರ: ‘ಭಾರತೀಯರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವವರು ವಿಕೃತ ಮನಸ್ಸಿನವರು. ಅವರ ವಿರುದ್ಧ ತೆಗೆದುಕೊಳ್ಳುವ ಕ್ರಮವು ಇತರರಿಗೆ ಪಾಠ ಆಗಬೇಕು’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಅಮೂಲ್ಯ ಎಂಬ ಯುವತಿ ಪಾಕ್‌ ಪರ ಘೋಷಣೆ ಕೂಗಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ. ಮುಂದೆ ಇನ್ಯಾರೂ ಈ ರೀತಿ ಮಾಡದಂತೆ ಸಂಘಟಕರು ಎಚ್ಚರ ವಹಿಸಬೇಕು’ ಎಂದರು.

ಶಾಸಕ ಸಾ.ರಾ. ಮಹೇಶ್‌ ಮಾತನಾಡಿ ‘ನಿನ್ನೆ ನಡೆದ ಘಟನೆ ನಾವೆಲ್ಲರೂ ತಲೆ ತಗ್ಗಿಸುವಂತಹದ್ದು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಯಾರೇ ಆಗಿರಲಿ. ದೇಶದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಈ ದೇಶಕ್ಕೆ ಋಣಿಯಾಗಿರಬೇಕು. ಪೊಲೀಸರು ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಹೋರಾಟದ ವೇಳೆ ಕಿಡಿ ಹಚ್ಚಲೆಂದೇ ಕೆಲವು ಕಿಡಿಗೇಡಿಗಳು ಇರುತ್ತಾರೆ. ಆಯೋಜಕರು ಇದರ ಸೂಕ್ಷ್ಮತೆ ಅರಿಯಬೇಕಿತ್ತು. ಪೊಲೀಸರು ಮೊದಲೇ ಕ್ರಮ ವಹಿಸಬಹುದಿತ್ತು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.