
ಆನೇಕಲ್ ತಾಲ್ಲೂಕಿನ ಗೆರಟಿಗನಬೆಲೆ ಎನ್.ಪೃಥ್ವಿರಾಜ್ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಕೃಷಿ ಮೇಳ -2025ರಲ್ಲಿ ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಆನೇಕಲ್: ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆರಟಿಗನಬೆಲೆ ಎನ್.ಪೃಥ್ವಿರಾಜ್ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಕೃಷಿ ಮೇಳ -2025ರಲ್ಲಿ ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎನ್.ಪೃಥ್ವಿರಾಜ್ ಅವರು ಪ್ರಗತಿಪರ ಕೃಷಿಯೊಂದಿಗೆ ಹೈನುಗಾರಿಕೆ, ಪಶುಸಂಗೋಪನೆ ಮಾಡುತ್ತಿದ್ದು ಕೃಷಿಯಲ್ಲಿ ಹೊಸತನ ಅಳವಡಿಸಿಕೊಂಡು ಎರಡು ಎಕರೆ ವಿಸ್ತೀರ್ಣದಲ್ಲಿ ಮೂರ್ನಾಲ್ಕು ಬಗೆ ಬೆಳೆಯನ್ನು ಬೆಳೆದಿದ್ದಾರೆ.
ಪೃಥ್ವಿರಾಜ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ರೈತರು ಕೃಷಿ ಜತೆಗೆ ಕೃಷಿ ಪೂರಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಹೈನುಗಾರಿಕೆ, ಮೀನುಗಾರಿಕೆ, ಕುಕ್ಕುಟೋದ್ಯಮ, ಕುರಿ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರ್ಥಿಕವಾಗಿ ಸದೃಢರಾಗಬಹುದಾಗಿದೆ. ರೈತರ ಕ್ಷೇತ್ರ ಭೇಟಿ, ವಿಚಾರ ಸಂಕಿರಣಗಳಿಂದ ಬೆಳೆ ಬಗ್ಗೆ ಹೆಚ್ಚು ಮಾಹಿತಿ ದೊರೆಯಿತು. ಜಮೀನನ್ನೇ ಸಂಶೋಧನೆಗಾಗಿ ಮೀಸಲಿಟ್ಟು ವಿವಿಧ ಬೆಳೆ ಬೆಳೆಯಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.