ಕನಕಪುರ: ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಸಂಘ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ ಬೆಂಬಲಿಸಿ ಕನಕಪುರದಲ್ಲಿ ಮೇ 27ರಿಂದ ನಗರಸಭೆ ಮುಂಭಾಗದ ಆವರಣದಲ್ಲಿ ಅನಿರ್ದಿಷ್ಟ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ.
ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ ನಗರಸಭೆಯ ಎಲ್ಲಾ ಪೌರಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ. ನಗರದ ಸ್ವಚ್ಛತೆ ಸೇರಿದಂತೆ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಗೆ ವೇದಿಕೆ ಸಿದ್ಧವಾಗಿದೆ. ಇದಕ್ಕೆ ನಗರಸಭೆ ಸಿಬ್ಬಂದಿ ಕೈಜೋಡಿಸಲಿದ್ದಾರೆ. ನಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.