ADVERTISEMENT

ಚನ್ನಪಟ್ಟಣ: ಪಾಕಿಸ್ತಾನಕ್ಕೆ ಜೈಕಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 14:03 IST
Last Updated 29 ಫೆಬ್ರುವರಿ 2024, 14:03 IST
ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ನಾಸೀರ್ ಹುಸೇನ್ ಅವರ ಬೆಂಬಲಿಗರ ಪಾಕಿಸ್ಥಾನಕ್ಕೆ ಜೈಕಾರವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು
ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ನಾಸೀರ್ ಹುಸೇನ್ ಅವರ ಬೆಂಬಲಿಗರ ಪಾಕಿಸ್ಥಾನಕ್ಕೆ ಜೈಕಾರವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು   

ಚನ್ನಪಟ್ಟಣ: ರಾಜ್ಯಸಭಾ ಚುನಾವಣೆಯಲ್ಲಿ ವಿಜೇತರಾದ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬರು ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಕಾವೇರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯ ಪದಾಧಿಕಾರಿಗಳು ದೇಶದ ವಿರುದ್ಧ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿರುವ ಪಾಕಿಸ್ಥಾನದ ಪರ ಜೈಕಾರ ಹಾಕುವ ಮೂಲಕ ದೇಶದ್ರೋಹ ಮಾಡಿದ್ದಾನೆ. ಆತನನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಪಾಕಿಸ್ತಾನದ ಪರ ಜೈಕಾರ ಹಾಕಿದವನಿಗೆ ಕಪಾಳ ಮೋಕ್ಷ ಮಾಡುವ ಬದಲು ಇದನ್ನು ಪ್ರಶ್ನಿಸಲು ಮುಂದಾದ ಪತ್ರಕರ್ತರ ಮೇಲೆ ದಬ್ಬಾಳಿಕೆ ಮಾಡಿರುವ ನಾಸೀರ್ ಹುಸೇನ್ ಕ್ರಮ ಖಂಡನೀಯ. ಅವರು ಮಾಧ್ಯಮಗಳ ಬಳಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ADVERTISEMENT

ನಿವೃತ್ತ ಶಿಕ್ಷಕ ಪುಟ್ಟಪ್ಪಾಜಿ, ಸಾಹಿತಿ ಕೂರಣಗೆರೆ ಕೃಷ್ಣಪ್ಪ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ಪದಾಧಿಕಾರಿಗಳಾದ ಶ್ರೀಧರ್, ವೆಂಕಟೇಶ್, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ಹನುಮಂತನಗರ ವೆಂಕಟರಮಣ, ಚಿಕ್ಕಣ್ಣಪ್ಪ, ಆರ್.ಶಂಕರ್, ಡ್ರೈವರ್ ಶಿವಣ್ಣ, ಸಯ್ಯದ್ ಮುಜಾಹಿದ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.