ADVERTISEMENT

ಮುನೇಶ್ವರನ ಬೆಟ್ಟ ಉಳಿಸಲು ಆಗ್ರಹಿಸಿ‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 7:48 IST
Last Updated 25 ಫೆಬ್ರುವರಿ 2020, 7:48 IST
ಬೆಟ್ಟ ಉಳಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.
ಬೆಟ್ಟ ಉಳಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.   

ರಾಮನಗರ: ಕನಕಪುರ ತಾಲ್ಲೂಕಿನ ಮುನೇಶ್ವರನ ಬೆಟ್ಟ (ಕಪಾಲ ಬೆಟ್ಟ) ಉಳಿಸಲು ಮುಂದಾಗದೇ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ‌ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ಮೌನ‌ ವಹಿಸಿರುವುದು ಸರಿಯಲ್ಲ. ಬೆಟ್ಟದ ಮೇಲೆ ನಿರ್ಮಾಣ ಹಂತದಲ್ಲಿ ಇರುವ ಪ್ರತಿಮೆಯನ್ನು ತೆರವುಗೊಳಿಸಬೇಕು. ಗೋಮಾಳ‌ ಜಾಗವನ್ನು ಕ್ರೈಸ್ತ ಮಿಶನರಿಗಳಿಂದ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT