ADVERTISEMENT

ಬಿಡದಿ: ಪಿಯು ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:50 IST
Last Updated 18 ಜೂನ್ 2020, 2:50 IST
ಪಿಯು ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಿರುವ ಸಿಬ್ಬಂದಿ
ಪಿಯು ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಿರುವ ಸಿಬ್ಬಂದಿ   

ಬಿಡದಿ: ಬಸವೇಶ್ವರ ಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಕಾಲೇಜು ಪ್ರಾಂಶುಪಾಲರು ವೀರಭದ್ರಯ್ಯ ಮಾತನಾಡಿ, 5 ಕಾಲೇಜುಗಳಿಂದ ಒಟ್ಟು 569 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದರಲ್ಲಿ 344 ಬಾಲಕಿಯರು, 225 ಬಾಲಕರು ಇದ್ದಾರೆ. ಪರೀಕ್ಷೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದೆ. ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಿಂಪಡಣೆ, ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ. 22 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಸಾನಿಟೈಸರ್ ಬಳಸಲಾಗುತ್ತದೆ. ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಬಿಡಲಾಗುತ್ತದೆ. ಈ ನಿಟ್ಟಿನಲ್ಲಿ ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕಿಂತ ಮೊದಲೇ ಹಾಜರಾಗಬೇಕಾಗುತ್ತದೆ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಕನಿಷ್ಠ ಮೂರು ಮೀಟರ್ ಅಂತರ ಕಾಯ್ದುಕೊಂಡು ಪರೀಕ್ಷಾ ಆಸನ ವ್ಯವಸ್ಥೆ ಮಾಡಲಾಗಿದೆ. ಆಯಾ ಕೊಠಡಿಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾರ್ಥಿಗಳೇ ತೆಗೆದುಕೊಳ್ಳಬೇಕು. ಪೆನ್ನು, ಪೆನ್ಸಿಲ್, ಇನ್ನಿತರೆ ಸಾಮಗ್ರಿಯನ್ನು ಎರವಲು ಪಡೆಯುವಂತಿಲ್ಲ. ಇನ್ನುಳಿದಂತೆ ಈ ಹಿಂದೆ ಇದ್ದ ನಿಯಮಗಳು ಅನ್ವಯವಾಗುತ್ತವೆ ಎಂದರು.

ADVERTISEMENT

ಪರೀಕ್ಷಾ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ಅವಶ್ಯಕ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಅಗತ್ಯ ಪರಿಕರಗಳ ಜೊತೆಗೆ ಒಬ್ಬ ಆರೋಗ್ಯ ಸಹಾಯಕರೂ ಪರೀಕ್ಷೆ ನಡೆಯುವ ವೇಳೆ ಕರ್ತವ್ಯ ನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.