ADVERTISEMENT

ಪಿಯು ಫಲಿತಾಂಶ: ವಿವಿಧ ಕಾಲೇಜುಗಳ ಸಾಧನೆ

ಶಾಂತಿನಿಕೇತನ ಕಾಲೇಜಿನ ಶಿಬಾ, ಗಗನಚಂದನಾಗೆ ಶೇ 97.66 ಅಂಕ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 13:47 IST
Last Updated 15 ಏಪ್ರಿಲ್ 2019, 13:47 IST
ಶಿಭಾಶೇ 97.66
ಶಿಭಾಶೇ 97.66   

ರಾಮನಗರ: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವು ಸೋಮವಾರ ಪ್ರಕಟಗೊಂಡಿದ್ದು, ಜಿಲ್ಲೆಯ ವಿವಿಧ ಕಾಲೇಜುಗಳು ಉತ್ತಮ ಸಾಧನೆ ಮಾಡಿವೆ.

ನಗರದ ಶಾಂತಿನಿಕೇತನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಶಿಭಾ ಮತ್ತು ಗಗನಚಂದನಾ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 586 (ಶೇ 97.66) ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಧುಮಿತಾ 600 ಕ್ಕೆ 558 (ಶೇ 93) ಅಂಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ದಲ್ಲಿದ್ದಾರೆ. 33 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿಯೂ, 39 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ, 114 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ರಸಾಯನ ವಿಜ್ಞಾನ ವಿಷಯದಲ್ಲಿ ಶಿಭಾ 100 ಕ್ಕೆ 100, ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಗಗನ ಚಂದನಾ, ಅಭಿನಂದನ್ ಮತ್ತು ವಿಕಾಸ್‌ ಎಂಬ ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳಿಸಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಕಾರ್ಯದರ್ಶಿ ಆರ್. ಕುಮಾರಸ್ವಾಮಿ, ನಿರ್ದೇಶಕಿ ಸೌಮ್ಯಕುಮಾರ್, ಪ್ರಾಚಾರ್ಯ ಕೆ.ಪಿ. ಶಿವಪ್ಪ, ಉಪಪ್ರಾಚಾರ್ಯ ದಿಲೀಪ್ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ನ್ಯೂ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜು: ಇಲ್ಲಿನ ನ್ಯೂ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿಗೆ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ರಷ್ಟು ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದಲ್ಲಿ ಎಚ್.ಟಿ. ಅಶ್ವಿನಿ 558 (ಶೇ 93) ಹಾಗೂ ವಾಣಿಜ್ಯ ವಿಭಾಗದಲ್ಲಿ ಆರ್. ಪೂಜಾ 546(ಶೇ 91) ಅಂಕಗಳನ್ನು ಪಡೆದಿದ್ದಾರೆ. 16 ಜನ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಎಸ್‌ಜಿಎಂ ಪದವಿ ಪೂರ್ವ ಕಾಲೇಜು: ಇಲ್ಲಿನ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್ ಜಿಎಂ ಪದವಿ ಪೂರ್ವ ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ 86 ವಾಣಿಜ್ಯ ವಿಭಾಗದಲ್ಲಿ ಶೇ 84 ರಷ್ಟು ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದಲ್ಲಿ ಪಿ. ಅನುಶ್ರೀ 518 (ಶೇ 86.33) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲಿಗರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಎಚ್.ಡಿ. ವಿಮರ್ಶಾ 560 (ಶೇ 93.33) ಅಂಕಗಳನ್ನು ಪಡೆದಿದ್ದಾರೆ. ಚಂದ್ರಶೇಖರ್ 553 (ಶೇ 92.16), ಎಂ. ಶಿವಪ್ರಸಾದ್ 550 (ಶೇ 91.66), ಎಂ. ಶೋಭಿತಾ 546 (ಶೇ 91) ಎಚ್.ಆರ್. ಅಶ್ವಿನಿ 527 (ಶೇ 87.83), ಸೌಜನ್ಯ 516 (ಶೇ 86) ಅಂಕಗಳನ್ನು ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 37 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉಳಿದ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಗಳ ಬಗ್ಗೆ ಸಂಸ್ಥೆಯ ಅಧ್ಯಕ್ಷ ಎಚ್. ಚಂದ್ರಶೇಖರ್, ಕಾರ್ಯದರ್ಶಿ ಎಚ್.ಸಿ. ಅಶ್ವಿನಿ, ಪ್ರಾಚಾರ್ಯ ಬಿ.ಕೆ. ಪುಟ್ಟಸ್ವಾಮಿಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.